HomeIndiaಸಂಸದ ಸ್ಥಾನದಿಂದ ಅನರ್ಹಗೊಂಡ ರಾಹುಲ್ ಗಾಂಧಿಗೆ ಮತ್ತೊಂದು ಶಾಕ್: ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಸೂಚನೆ

ಸಂಸದ ಸ್ಥಾನದಿಂದ ಅನರ್ಹಗೊಂಡ ರಾಹುಲ್ ಗಾಂಧಿಗೆ ಮತ್ತೊಂದು ಶಾಕ್: ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಸೂಚನೆ

ನವದೆಹಲಿ: ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಂಡ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿ ಅವರಿಗೆ ಸೂಚನೆ ನೀಡಲಾಗಿದೆ.

ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಯವರಿಗೆ ಲೋಕಸಭಾ ಹೌಸಿಂಗ್ ಕಮಿಟಿಯಿಂದ ನೋಟಿಸ್ ನೀಡಲಾಗಿದೆ. ಮೋದಿ ಹೆಸರಿನ ಕುರಿತಾಗಿ ಹೇಳಿಕೆ ನೀಡಿದ್ದ ಹಿನ್ನಲೆಯಲ್ಲಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿದ್ದ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ, ಹೀಗಾಗಿ ಸರ್ಕಾರಿ ಬಂಗಲೆ ತೊರೆಯುವಂತೆ ಲೋಕಸಭಾ ಹೌಸಿಂಗ್ ಕಮಿಟಿಯಿಂದ ಅವರಿಗೆ ನೋಟಿಸ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2004 ರಲ್ಲಿ ಲೋಕಸಭೆಯ ಸದಸ್ಯರಾಗಿ ಆಯ್ಕೆಯಾದ ನಂತರ ಗಾಂಧಿ ಅವರಿಗೆ 12, ತುಘಲಕ್ ಲೇನ್‌ನಲ್ಲಿರುವ ಬಂಗಲೆಯನ್ನು ನೀಡಲಾಗಿತ್ತು. ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೋಷಾರೋಪಣೆ ಮಾಡಿದ್ದರಿಂದ ಸೂರತ್‌ನ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಇದರ ಪರಿಣಾಮವಾಗಿ ಲೋಕಸಭಾ ಸೆಕ್ರೆಟರಿಯೇಟ್ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿತು, ಲೋಕಸಭೆಯಿಂದ ಅನರ್ಹಗೊಂಡ ನಂತರ ಇದೀಗ ಲೋಕಸಭೆಯ ವಸತಿ ಸಮಿತಿಯು ಸರ್ಕಾರ ಮಂಜೂರು ಮಾಡಿದ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular