alex Certify ಮಹಿಳೆಯರಿಗೆ ಗುಡ್ ನ್ಯೂಸ್: ‘ಮಹಿಳಾ ಸಮ್ಮಾನ್ ಉಳಿತಾಯ ಯೋಜನೆ’ಯಡಿ ಶೇ. 7.5 ರಷ್ಟು ಬಡ್ಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರಿಗೆ ಗುಡ್ ನ್ಯೂಸ್: ‘ಮಹಿಳಾ ಸಮ್ಮಾನ್ ಉಳಿತಾಯ ಯೋಜನೆ’ಯಡಿ ಶೇ. 7.5 ರಷ್ಟು ಬಡ್ಡಿ

ನವದೆಹಲಿ: ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆ ಎರಡು ವರ್ಷಗಳ ಅವಧಿಯನ್ನು ಹೊಂದಿದ್ದು, 7.5% ಬಡ್ಡಿ ದರ ನೀಡುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆ ಘೋಷಿಸಿದ್ದು, ಮಹಿಳೆಯರು ಅಥವಾ ಹುಡುಗಿಯರ ಹೆಸರಿನಲ್ಲಿ ಎರಡು ಲಕ್ಷ ರೂಪಾಯಿಗಳವರೆಗೆ ಠೇವಣಿ ಸೌಲಭ್ಯವನ್ನು ಎರಡು ವರ್ಷಗಳ ಅವಧಿಗೆ ಶೇಕಡ 7.5 ರ ಸ್ಥಿರ ಬಡ್ಡಿ ದರದಲ್ಲಿ ನೀಡಲಾಗುವುದು.

ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಈ ಯೋಜನೆಯು 2023-24 ರ ಹಣಕಾಸು ವರ್ಷದಲ್ಲಿ ಪ್ರಾರಂಭವಾಗಲಿದೆ. ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆಯಲ್ಲಿ ಮಹಿಳೆಯರ ಹಣವನ್ನು ಉಳಿಸಲು ಪ್ರೋತ್ಸಾಹಿಸಲು ಮೊತ್ತದ ಮಿತಿಯನ್ನು 10 ಲಕ್ಷ ರೂಪಾಯಿಗಳಿಗೆ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಬಾಕಿ ಉಳಿದಿಲ್ಲ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...