HomeKarnatakaBIG NEWS: ಇನ್ಸ್ ಪೆಕ್ಟರ್ ವಿರುದ್ಧ ಸುಳ್ಳು ಆರೋಪ; ಇಬ್ಬರು ಕಾನ್ಸ್ ಟೇಬಲ್ ಗಳು ಸಸ್ಪೆಂಡ್

BIG NEWS: ಇನ್ಸ್ ಪೆಕ್ಟರ್ ವಿರುದ್ಧ ಸುಳ್ಳು ಆರೋಪ; ಇಬ್ಬರು ಕಾನ್ಸ್ ಟೇಬಲ್ ಗಳು ಸಸ್ಪೆಂಡ್

ಬೆಂಗಳೂರು: ಇನ್ಸ್ ಪೆಕ್ಟರ್ ವಿರುದ್ಧ ಭ್ರಷ್ಟಾಚಾರ, ಕಿರುಕುಳದ ಸುಳ್ಳು ಆರೋಪ ಮಾಡಿದ್ದ ಸುಬ್ರಹ್ಮಣ್ಯನಗರ ಠಾಣೆಯ ಇಬ್ಬರು ಕಾನ್ಸ ಟೇಬಲ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಸುಬ್ರಹ್ಮಣ್ಯನಗರ ಠಾಣೆ ರೈಟರ್ ಶಿವಕುಮಾರ್ ಹಾಗೂ ಠಾಣೆಯ ಪಿಸಿ ವಿಜಯ್ ರಾಠೋಡ್ ಅಮಾನತುಗೊಂಡವರು. ಇನ್ಸ್ ಪೆಕ್ಟರ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕಾನ್ಸ್ ಟೇಬಲ್ ಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

ಇನ್ಸ್ ಪೆಕ್ಟರ್ ವಿರುದ್ಧದ ದೂರಿನ ಬಗ್ಗೆ ತನಿಖೆ ನಡೆಸಿದಾಗ ಇಬ್ಬರು ಕಾನ್ಸ್ ಟೇಬಲ್ ಗಳು ಸುಳ್ಳು ಆರೋಪ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular