ಲಂಚ ಪಡೆದ ಪ್ರಕರಣದಲ್ಲಿ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಲೋಕಾಯುಕ್ತ ಪೊಲೀಸರು ಸೋಮವಾರದಂದು ತುಮಕೂರು ಸಮೀಪದ ಕ್ಯಾತ್ಸಂದ್ರದಲ್ಲಿ ಬಂಧಿಸಿದ್ದು, ಬೆಂಗಳೂರಿನ ತಮ್ಮ ಕಚೇರಿಯಲ್ಲಿ ತಡರಾತ್ರಿಯವರೆಗೂ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮಾಡಾಳ್ ವಿರೂಪಾಕ್ಷಪ್ಪನವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಲೋಕಾಯುಕ್ತ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ಕೋರುವ ಸಾಧ್ಯತೆ ಇದೆ. ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಮನೆಯಲ್ಲಿ ಸಿಕ್ಕ ಕೋಟ್ಯಾಂತರ ರೂಪಾಯಿ ನಗದಿನ ಮೂಲದ ಕುರಿತೂ ಅವರನ್ನು ಪ್ರಶ್ನಿಸಲಾಗುತ್ತದೆ.
ನಿರೀಕ್ಷಣಾ ಜಾಮೀನು ಕೋರಿ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡ ಬಳಿಕ ಬೆಂಗಳೂರಿನತ್ತ ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದ ಅವರನ್ನು ಲೋಕಾಯುಕ್ತ ಪೊಲೀಸರು ಕ್ಯಾತ್ಸಂದ್ರ ಬಳಿ ಬಂಧಿಸಿದ್ದರು.