HomeKarnatakaBSY ನಿವಾಸದೆದುರು ನಡೆದ ಪ್ರತಿಭಟನೆಯಲ್ಲಿ ಜೆಡಿಎಸ್ ಮಾಜಿ ಶಾಸಕಿಯ ಆಪ್ತ ಸಹಾಯಕ; ಫೋಟೋ ವೈರಲ್

BSY ನಿವಾಸದೆದುರು ನಡೆದ ಪ್ರತಿಭಟನೆಯಲ್ಲಿ ಜೆಡಿಎಸ್ ಮಾಜಿ ಶಾಸಕಿಯ ಆಪ್ತ ಸಹಾಯಕ; ಫೋಟೋ ವೈರಲ್

ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಸೋಮವಾರದಂದು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಬಂಜಾರ ಸಮುದಾಯದಿಂದ ಪ್ರತಿಭಟನೆ ನಡೆದಿದ್ದು, ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನಿವಾಸದ ಮೇಲೆ ಕಲ್ಲು ತೂರಲಾಗಿತ್ತು.

ಕಲ್ಲು ತೂರಾಟದ ಕುರಿತಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಾಯಕರು ಪರಸ್ಪರ ಆರೋಪ – ಪ್ರತ್ಯಾರೋಪದಲ್ಲಿ ತೊಡಗಿದ್ದು, ಇದರ ಮಧ್ಯೆ ಮಾತನಾಡಿರುವ ಬಿ.ಎಸ್. ಯಡಿಯೂರಪ್ಪನವರು ತಪ್ಪು ತಿಳುವಳಿಕೆಯಿಂದ ಈ ಪ್ರತಿಭಟನೆ ನಡೆದಿದೆ. ಕಲ್ಲು ತೂರಾಟ ಮಾಡಿರುವ ಕುರಿತು ನಾನು ಯಾರನ್ನೂ ದೂರಲಾರೆ ಎಂದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೋಮವಾರದಂದು ನಡೆದ ಪ್ರತಿಭಟನೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರ ಆಪ್ತ ಸಹಾಯಕ ಪಾಲ್ಗೊಂಡಿದ್ದ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪ್ರತಿಭಟನೆಯನ್ನು ಜೆಡಿಎಸ್ ಕೂಡ ಬೆಂಬಲಿಸುತ್ತಿದೆಯಾ ಎಂಬ ಪ್ರಶ್ನೆಗೆ ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular