
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಘಟನಾ ಸ್ಥಳ ಪರಿಶೀಲಿಸಿ ಮಾಹಿತಿ ಪಡೆದ ಗೃಹ ಸಚಿವರು, ಸುದ್ದಿಗಾರರೊಂದಿಗೆ ಮಾತನಾಡಿ, ಕೇಸ್ ದಾಖಲಿಸಬೇಡಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ ಕಲ್ಲು ತೂರಾಟದ ವೇಳೆ ಕೆಲವು ಪೊಲೀಸರಿಗೆ ಗಾಯಗಳಾಗಿವೆ ಎಂದರು.
ಗಲಾಟೆಯಲ್ಲಿ ಕೆಲ ಕ್ರಿಮಿನಲ್ ಹಿನ್ನೆಲೆಯುಳ್ಳವರೂ ಇದ್ದಾರೆ. ಈ ಘಟನೆಗಳ ಕುರಿತು ಸಂಪೂರ್ಣ ತನಿಖೆ ನಡೆಸಲಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ಕೆಲ ರಾಜಕೀಯ ನಾಯಕರು ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ ಎಲ್ಲವನ್ನೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

