
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸರ್ಕಾರದ ನಿರ್ಧಾರದಿಂದಾಗಿ ಬಂಜಾರ ಸಮುದಾಯಕ್ಕೆ ಆತಂಕವುಂಟಾಗಿದೆ. ಮೀಸಲಾತಿ ವಿಚಾರದಲ್ಲಿ ಸರ್ಕಾರದ ನಿರ್ಧಾರಕ್ಕೆ ನನ್ನ ಬೆಂಬಲವಿಲ್ಲ ಎಂದು ಹೇಳಿದರು.
ಸರ್ಕಾರ ಹುಡುಗಾಟದ ಮೀಸಲಾತಿ ಘೋಷಣೆ ಮಾಡಿದೆ. ಸಮುದಾಯಗಳ ನಡುವೆ ಸಂಘರ್ಷ ಸೃಷ್ಟಿಸುತ್ತಿದ್ದಾರೆ. ಇಂತಹ ವಾತಾವರಣ ನಿರ್ಮಾಣವಾಗಲು ಸರ್ಕಾರವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

