HomeKarnatakaBIG NEWS: ಇದು ಬಿಜೆಪಿಯ ಆಂತರಿಕ ಕುತಂತ್ರ; ಆಡಳಿತ ಪಕ್ಷದ ನಾಯಕರ ವಿರುದ್ಧ ಡಿ.ಕೆ. ಶಿವಕುಮಾರ್...

BIG NEWS: ಇದು ಬಿಜೆಪಿಯ ಆಂತರಿಕ ಕುತಂತ್ರ; ಆಡಳಿತ ಪಕ್ಷದ ನಾಯಕರ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಟ್ವಿಸ್ಟ್ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇದು ಬಿಜೆಪಿಯ ಆಂತರಿಕ ಷಡ್ಯಂತ್ರ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಬಿಜೆಪಿಯಲ್ಲಿ ಯಾರಿಗೂ ಸಮಾಧಾನವಿಲ್ಲ. ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಇಂತದ್ದೊಂದು ಷಡ್ಯಂತ್ರ ನಡೆಸಿದ್ದಾರೆ. ಬೇಕಂತಲೇ ಅವರ ಮನೆ ಮೇಲೆ ಕಲ್ಲು ಹೊಡೆಸಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದರೆ ಏನರ್ಥ ? ಇದು ಬಿಜೆಪಿಯ ಆಂತರಿಕ ಕುತಂತ್ರ. ಯಡಿಯೂರಪ್ಪವರನ್ನು ರಾಜಕೀಯವಾಗಿ ಮೂಲೆಗುಂಪು ಮಾಡಬೇಕು ಎಂಬ ಕಾರಣಕ್ಕೆ ಇಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular