HomeKarnatakaBIG NEWS: ಬಿಜೆಪಿ - ಜೆಡಿಎಸ್ ನಡುವೆ ಮ್ಯಾಚ್ ಫಿಕ್ಸಿಂಗ್; ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ

BIG NEWS: ಬಿಜೆಪಿ – ಜೆಡಿಎಸ್ ನಡುವೆ ಮ್ಯಾಚ್ ಫಿಕ್ಸಿಂಗ್; ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ಅಖಾಡ ರಂಗೇರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

ವರುಣಾ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿವೆ ಎಂದು ಸಿದ್ದರಾಮಯ್ಯ ಆರೊಪಿಸಿದ್ದಾರೆ. ವರುಣಾ ಹಾಗೂ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಸೋಲಿಸುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ನಿಜ ಎಂದು ಹೇಳಿದ್ದಾರೆ.

2018ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದ್ದವು ಎಂದು ಈ ಹಿಂದೆ ಕಾಂಗ್ರೆಸ್ ಹೇಳಿತ್ತು. ಅಂತೆಯೇ ಈ ಚುನಾವಣೆಯಲ್ಲಿಯೂ ಎರಡೂ ಪಕ್ಷಗಳು ಒಳಒಪ್ಪಂದ ಮಾಡಿಕೊಂಡಿವೆ ಎಂದು ಈಗ ಸಿದ್ದರಾಮಯ್ಯ ಹೇಳಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular