HomeKarnatakaBIG NEWS: ಡಿ.ಕೆ. ಶಿವಕುಮಾರ್ ರಿಂದ ಬಿಜೆಪಿ ಶಾಸಕರ ಸಂಪರ್ಕ; ಕಾಂಗ್ರೆಸ್ ಗೆ ಸರಿಯಾದ ಅಭ್ಯರ್ಥಿಗಳಿಲ್ಲ...

BIG NEWS: ಡಿ.ಕೆ. ಶಿವಕುಮಾರ್ ರಿಂದ ಬಿಜೆಪಿ ಶಾಸಕರ ಸಂಪರ್ಕ; ಕಾಂಗ್ರೆಸ್ ಗೆ ಸರಿಯಾದ ಅಭ್ಯರ್ಥಿಗಳಿಲ್ಲ ಎಂದು ಸಿಎಂ ಟಾಂಗ್

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಮ್ಮ ಶಾಸಕರನ್ನು ಸಂಪರ್ಕಿಸಿದ್ದು, ಕಾಂಗ್ರೆಸ್ ಗೆ ಸೇರ್ಪಡೆಯಾಗುವಂತೆ ಹೇಳುತ್ತಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಡಿ.ಕೆ. ಶಿವಕುಮಾರ್, ಬಿಜೆಪಿಯ ಶಾಸಕರಿಗೆ ಫೋನ್ ಮಾಡುತ್ತಿದ್ದಾರೆ. ಟಿಕೆಟ್ ನೀಡುತ್ತೇವೆ ಎಂದು 2-3 ದಿನಗಳಿಂದ ಕರೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಗೆ ಸರಿಯಾದ ಅಭ್ಯರ್ಥಿಗಳಿಲ್ಲ. ಕಾಂಗ್ರೆಸ್ಸಿಗರು ಹತಾಶರಾಗಿದ್ದಾರೆ, ಕಾಂಗ್ರೆಸ್ ಸ್ಥಿತಿ ದಿವಾಳಿಯಾಗಿದೆ ಎಂದು ಟೀಕಿಸಿದರು.

ಇದೇ ವೇಳೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ ವಿಚಾರವಾಗಿ ಮಾತನಾಡಿದ ಸಿಎಂ, ಏಪ್ರಿಲ್ ಮೊದಲ ವಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಗೆಲ್ಲುವ ಪಕ್ಷಕ್ಕೆ ಎಲ್ಲಾ ಕಡೆ ಫೈಟ್ ಇದ್ದೇ ಇರುತ್ತದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular