HomeKarnatakaBIG NEWS: ವಲಸಿಗ ಸಚಿವರು ಮತ್ತೆ ಕಾಂಗ್ರೆಸ್ ಸೇರ್ಪಡೆ; ಚೆಲುವರಾಯಸ್ವಾಮಿ ಅವರಿಂದ ಸ್ಫೋಟಕ ಹೇಳಿಕೆ

BIG NEWS: ವಲಸಿಗ ಸಚಿವರು ಮತ್ತೆ ಕಾಂಗ್ರೆಸ್ ಸೇರ್ಪಡೆ; ಚೆಲುವರಾಯಸ್ವಾಮಿ ಅವರಿಂದ ಸ್ಫೋಟಕ ಹೇಳಿಕೆ

ವಿಧಾನಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲವಾದರೂ ಸಹ ಪಕ್ಷಾಂತರ ಪರ್ವ ಈಗಾಗಲೇ ಆರಂಭವಾಗಿದೆ. ಆಡಳಿತರೂಢ ಬಿಜೆಪಿಯ ಕೆಲ ಶಾಸಕರುಗಳು ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಮುಂದಿನ ದಿನಗಳಲ್ಲಿ ಪಕ್ಷಾಂತರ ಪರ್ವ ಮುಂದುವರಿಯಲಿದೆ ಎಂದು ಹೇಳಲಾಗುತ್ತಿದೆ.

ಇದರ ಮಧ್ಯೆ ಬೆಂಗಳೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಎನ್. ಚೆಲುವರಾಯಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದು, ಕಾಂಗ್ರೆಸ್ ನಿಂದ ವಲಸೆ ಹೋಗಿ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಎಸ್.ಟಿ. ಸೋಮಶೇಖರ್, ಭೈರತಿ ಬಸವರಾಜು ಸೇರಿದಂತೆ ಹಲವರು ಮತ್ತೆ ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇವರುಗಳ ಪಕ್ಷ ಸೇರ್ಪಡೆ ಕುರಿತು ಈಗಾಗಲೇ ಚರ್ಚೆ ನಡೆಯುತ್ತಿದೆ. ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಈ ಕುರಿತು ಒಂದು ಸ್ಪಷ್ಟತೆ ಸಿಗಲಿದೆ ಎಂದು ಚೆಲುವರಾಯಸ್ವಾಮಿ ಹೇಳಿದ್ದು, ಹೀಗಾಗಿ ಸೋಮಶೇಖರ್ ಮೊದಲಾದವರು ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಹೋಗಬಹುದು ಎಂಬ ವದಂತಿಗಳಿಗೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular