ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಸಂಸ್ಕೃತವನ್ನು ಅಧಿಕೃತ ಭಾಷೆಯನ್ನಾಗಿ ಮಾಡಲಾಗುತ್ತದೆ ಎಂಬ ಊಹಾಪೋಹ ಹರಿದಾಡುತ್ತಿದ್ದು, ಕೇಂದ್ರ ಸರ್ಕಾರ ಈಗ ಇದಕ್ಕೆ ತೆರೆ ಎಳೆದಿದೆ.
ಮಂಗಳವಾರದಂದು ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ, ಸಂಸ್ಕೃತವನ್ನು ಅಧಿಕೃತ ಭಾಷೆಯನ್ನಾಗಿ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಭಾರತದ ಸಂವಿಧಾನ 343 (1) ನೇ ಪರಿಚ್ಛೇದದ ಪ್ರಕಾರ ಕೇಂದ್ರ ಸರ್ಕಾರದ ಅಧಿಕೃತ ಭಾಷೆ ದೇವನಾಗರಿ ಲಿಪಿಯಲ್ಲಿರುವ ಹಿಂದಿ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.