ನವದೆಹಲಿ: ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವುದು ಮೂಲಭೂತ ಅಗತ್ಯವಾಗಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ದ್ವೇಷ ಭಾಷಣ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದೆ. ದೇಶದಲ್ಲಿ ಕೋಮು ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ನ್ಯಾಯಪೀಠ ಹೇಳಿದೆ.
ಕೇವಲ ದೂರು ದಾಖಲಿಸುವುದರಿಂದ ದ್ವೇಷ ಭಾಷಣದ ಸಮಸ್ಯೆ ಬಗೆಹರಿಸಲು ಆಗುವುದಿಲ್ಲ. ಬೇರೆ ಯಾವುದಾದರೂ ಕ್ರಮ ಕೈಗೊಳ್ಳಲಾಗಿದೆಯೇ ಎಂದು ನ್ಯಾಯಪೀಠ ಪ್ರಶ್ನಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ದ್ವೇಷ ಭಾಷಣ ಸಂಬಂಧ ಇದುವರೆಗೆ ಒಟ್ಟು 18 ಎಫ್ಐಆರ್ ದಾಖಲಿಸಿರುವುದಾಗಿ ತಿಳಿಸಿದ್ದಾರೆ. ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.