HomeKarnatakaBIG NEWS: ನೀತಿ ಸಂಹಿತೆ ಜಾರಿ ಹಿನ್ನೆಲೆ; ಸರ್ಕಾರಿ ಕಾರ್ಯಕ್ರಮಗಳು ರದ್ದು; ಸಿಎಂ ಜಿಲ್ಲಾ ಪ್ರವಾಸವೂ...

BIG NEWS: ನೀತಿ ಸಂಹಿತೆ ಜಾರಿ ಹಿನ್ನೆಲೆ; ಸರ್ಕಾರಿ ಕಾರ್ಯಕ್ರಮಗಳು ರದ್ದು; ಸಿಎಂ ಜಿಲ್ಲಾ ಪ್ರವಾಸವೂ ಕ್ಯಾನ್ಸಲ್

ಬೆಂಗಳೂರು: ಇಂದೇ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರಿ ಕಾರ್ಯಕ್ರಮಗಳು ರದ್ದಾಗುವ ಸಾಧ್ಯತೆ ಇದೆ.

ಸಿಎಂ ಬೊಮ್ಮಾಯಿ ಇಂದು ಕೊಪ್ಪಳ, ಹಾವೇರಿ ಹಾಗೂ ಸ್ವಕ್ಷೇತ್ರ ಶಿಗ್ಗಾವಿ ಪ್ರವಾಸ ಕೈಗೊಂಡಿದ್ದರು. ಕೊಪ್ಪಳದಲ್ಲಿ ನೀರಾವರಿ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಇಂದು ಬೆಳಿಗ್ಗೆ 11:30ಕ್ಕೆ ಚುನಾವಣಾ ಆಯೋಗ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಿದ್ದು, ಇಂದಿನಿಂದ ನೀತಿ ಸಂಹಿತೆ ಜಾರಿಗೆ ಬರಲಿದೆ. ಹಾಗಾಗಿ ಜಿಲ್ಲಾ ಪ್ರವಾಸ ಕಾರ್ಯಕ್ರಮ ರದ್ದಾಗಿವೆ.

ಈ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳು ರದ್ದಾಗಲಿವೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular