
ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ರವಿಶಂಕರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ಡಾ.ಅರುಣ್ ಸೋಮಣ್ಣ ಅವರನ್ನು ತುಮಕೂರು ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಕ್ರಮಕ್ಕೆ ಬಿಜೆಪಿಯಲ್ಲೇ ಅಸಮಾಧಾನ ವ್ಯಕ್ತವಾಗಿದೆ. ಬಿಜೆಪಿ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಯಡಿಯೂರಪ್ಪ ವಿರೋಧಿಗಳಿಗೆ ಬೆಂಬಲವಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ತುಮಕೂರಿನಲ್ಲಿ ಮುಖಂಡರ ಕೊರತೆಯಿರುವುದರಿಂದ ಬೆಂಗಳೂರಿನಿಂದ ಆಮದು ಮಾಡಿಕೊಳ್ಳುತ್ತಿರುವ ಅರುಣ್ ಸೋಮಣ್ಣಗೆ ಸ್ವಾಗತ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ ಮಾಡಲಾಗಿದೆ. ಅಲ್ಲದೇ ಗೋ ಬ್ಯಾಕ್ ಅಭಿಯಾನ ಕೂಡ ಅರಂಭವಾಗಿದೆ.

