HomeKarnatakaBIG NEWS: ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ; ಸಿಎಂ ವಿಶ್ವಾಸ

BIG NEWS: ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ; ಸಿಎಂ ವಿಶ್ವಾಸ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಾಂಕ ಇಂದು ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ನಿರೀಕ್ಷೆಯಂತೆ ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನೀತಿ ಸಂಹಿತೆ ಜಾರಿಯಾಗುವುದರಿಂದ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ. ಜಿಲ್ಲಾ ಪ್ರವಾಸ ಕೂಡ ರದ್ದಾಗಿದೆ. ಕಳೆದ ಬಾರಿ 27ರಂದು ಚುನಾವಣೆ ಘೋಷಣೆಯಾಗಿತ್ತು. ಈ ಬಾರಿ ಎರಡು ದಿನ ತಡವಾಗಿದೆ. ಇಂದು ಚುನಾವಣೆ ದಿನಾಂಕ ಘೋಷಣೆಯಾಗಲಿದೆ ಎಂದರು.

ಯಾರೂ ಕೂಡ ಬಿಜೆಪಿಯನ್ನು ಬಿಟ್ಟು ಬೇರೆ ಪಕ್ಷಗಳಿಗೆ ಹೋಗಲ್ಲ. ಕರ್ನಾಟಕದಲ್ಲಿ ಬಿಜೆಪಿ ಬಹುಮತಗಳಿಂದ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular