HomeKarnatakaBIG NEWS: ಕರ್ನಾಟಕ ವಿಧಾನಸಭಾ ಚುನಾವಣೆ: 80 ವರ್ಷ ಮೇಲ್ಪಟ್ಟವರು, ವಿಕಲಚೇತನರಿಗೆ ಮನೆಯಿಂದಲೇ ಮತದಾನದ ಅವಕಾಶ

BIG NEWS: ಕರ್ನಾಟಕ ವಿಧಾನಸಭಾ ಚುನಾವಣೆ: 80 ವರ್ಷ ಮೇಲ್ಪಟ್ಟವರು, ವಿಕಲಚೇತನರಿಗೆ ಮನೆಯಿಂದಲೇ ಮತದಾನದ ಅವಕಾಶ

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಕೇಂದ್ರ ಮೇ 24ಕಕ್ಕೆ 15ನೇ ವಿಧಾನಸಭೆ ಅವಧಿ ಮುಕ್ತಾಯವಾಗಲಿದೆ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‌ ಕರ್ನಾಟಕದಲ್ಲಿ ಚುನಾವಣೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕರ್ನಾಟಕದಲ್ಲಿ 5 ಕೋಟಿ 21 ಲಕ್ಷ ಮತದಾರರಿದ್ದಾರೆ. ಪುರುಷ ಮತದಾರರು-2,63,43,561, ಮಹಿಳೆಯರು 2,59,26,319 ಮತದಾರರಿದ್ದಾರೆ. ತೃತೀಯಲಿಂಗಿಗಳು 4,699 ಮತದಾರರು ಇದ್ದಾರೆ. 12.15 ಲಕ್ಷ ಯುವ ಮತದಾರರಿದ್ದಾರೆ.

5.55 ಲಕ್ಷ ವಿಕಲಚೇತನ ಮತದಾರರಿದ್ದು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗುವುದು. ಕರ್ನಾಟಕದಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀಡಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular