HomeKarnatakaBIG NEWS: ನೀತಿ ಸಂಹಿತೆ ಜಾರಿ; ಕಟೌಟ್ ಗಳ ತೆರವು

BIG NEWS: ನೀತಿ ಸಂಹಿತೆ ಜಾರಿ; ಕಟೌಟ್ ಗಳ ತೆರವು

ಕೊಪ್ಪಳ: ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಮುಖ್ಯಮಂತ್ರಿಗಳು, ಮಂತ್ರಿಗಳು, ವಿಪಕ್ಷ ನಾಯಕರು ಸರ್ಕಾರಿ ಸೌಲಭ್ಯಗಳನ್ನು ಬಳಸುವಂತಿಲ್ಲ. ಈ ಹಿನ್ನೆಲೆಯಲ್ಲಿ ಸಚಿವರು, ವಿಪಕ್ಷ ನಾಯಕರಿಗೆ ನೀತಿ ಸಂಹಿತೆ ಬಿಸಿ ತಟ್ಟಿದೆ.

ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ. ಈ ನಡುವೆ ಕೊಪ್ಪಳದ ಯಲಬುರ್ಗದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಸಚಿವರು, ಶಾಸಕರ ಕಟೌಟ್ ಗಳನ್ನು ತೆರವುಗೊಳಿಸಲಾಗಿದೆ.

ಯಲಬುರ್ಗಾ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು, ಯಲಬುರ್ಗದಾದ್ಯಂತ ಅಳವಡಿಸಲಾಗಿದ್ದ ಸಿಎಂ ಹಾಗೂ ಸಚಿವರ ಬೃಹತ್ ಕಟೌಟ್, ಬ್ಯಾನರ್, ಬಿಜೆಪಿ ಬಾವುಟಗಳನ್ನು ತೆರವುಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular