HomeKarnatakaBIG NEWS: ಚುನಾವಣೆ ಘೋಷಣೆ ಬೆನ್ನಲ್ಲೇ ಸಿಎಂ ನಿವಾಸದಲ್ಲಿ ಮಹತ್ವದ ಸಭೆ

BIG NEWS: ಚುನಾವಣೆ ಘೋಷಣೆ ಬೆನ್ನಲ್ಲೇ ಸಿಎಂ ನಿವಾಸದಲ್ಲಿ ಮಹತ್ವದ ಸಭೆ

ಬೆಂಗಳೂರು: ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮೇ 10ರಂದು ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನಿವಾಸದಲ್ಲಿ ಮಹತ್ವದ ಸಭೆ ಆರಂಭವಾಗಿದೆ.

ಮುಖ್ಯಮಂತ್ರಿಗಳ ರೇಸ್ ಕೋರ್ಸ್ ರಸ್ತೆಯಲ್ಲಿರುವ ನಿವಾಸದಲ್ಲಿ ಬಿಜೆಪಿ ನಾಯಕರು ಸಭೆ ನಡೆಸಿದ್ದು, ಮಹತ್ವದ ಚರ್ಚೆ ನಡೆದಿದೆ. ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ವಿ. ಸೋಮಣ್ಣ, ಶಿವರಾಮ್ ಹೆಬ್ಬಾರ್, ಮುನಿರತ್ನ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಚುನಾವಣೆ ತಯಾರಿ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular