HomeKarnatakaBIG NEWS: ಇನ್ನೊಂದು ವಾರದಲ್ಲಿ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಸಿಎಂ ಬೊಮ್ಮಾಯಿ ಮಾಹಿತಿ

BIG NEWS: ಇನ್ನೊಂದು ವಾರದಲ್ಲಿ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು: ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಆಡಳಿತಾರೂಢ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿಯೂ ಫೈನಲ್ ಆಗಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದಲ್ಲಿ ಇಂದು ಬಿಜೆಪಿ ನಾಯಕರ ಮಹತ್ವದ ಸಭೆ ನಡೆದಿದ್ದು, ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇನ್ನೊಂದು ವಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಚುನಾವಣೆ ಎದುರಿಸಲು ಬಿಜೆಪಿ ಸರ್ವಸನ್ನದ್ಧವಾಗಿದೆ. ಚುನಾವಣೆ ಘೋಷಣೆಗೂ ಮುಂಚಿತವಾಗಿಯೇ ಬಿಜೆಪಿ ಎಲ್ಲಾ ರೀತಿಯಲ್ಲಿಯೂ ಸಿದ್ಧತೆ ಮಾಡಿಕೊಂಡಿದೆ. ಅಭ್ಯರ್ಥಿಗಳ ಪಟ್ಟಿಯೂ ಅಂತಿಮವಾಗಿದೆ. ವಾರದೊಳಗೆ ಅಭ್ಯರ್ಥಿಗಳ ಘೋಷಣೆಯಾಗಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular