
ರಾಜಧಾನಿ ಬೆಂಗಳೂರಿಗೆ ಬರುವ ಹಾಗೂ ಬೆಂಗಳೂರಿನಿಂದ ಹೊರ ಜಿಲ್ಲೆಗಳಿಗೆ ತೆರಳುವ ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ, ದೇವನಹಳ್ಳಿಯ ವೆಂಕಟಗಿರಿ ಚೆಕ್ ಪೋಸ್ಟ್ ನಲ್ಲಿ ಬೆಂಗಳೂರಿಗೆ ಬರುವ ವಾಹನಗಳನ್ನು ತಡೆದು ತಪಾಸಣೆ ನಡೆಸಲಾಗುತ್ತಿದೆ.
ಗಡಿ ಜಿಲ್ಲೆ ಬೆಳಗಾವಿಯಲ್ಲಿಯೂ ಪೊಲೀಸರು ಪ್ರತಿ ಚೆಕ್ ಪೋಸ್ಟ್ ಗಳಲ್ಲಿ ವಾಹನ ತಪಾಸಣೆ ನಡೆಸಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಮದ್ಯಗಳನ್ನು ವಶಕ್ಕೆ ಪಡೆದಿದ್ದಾರೆ.

