HomeKarnatakaBIG NEWS: ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿ ದುರಂತ; ಮೂವರು ಯುವಕರ ದುರ್ಮರಣ

BIG NEWS: ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿ ದುರಂತ; ಮೂವರು ಯುವಕರ ದುರ್ಮರಣ

ಚಿತ್ರದುರ್ಗ: ರಜೆ ದಿನಗಳನ್ನು ಕಳೆಯಲು ಊರಿಗೆ ಬಂದ ಪಿಯು ವಿದ್ಯಾರ್ಥಿಗಳು ಕೆರೆಯಲ್ಲಿ ಈಜಲು ಹೋಗಿ ದುರಂತಕ್ಕೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದಲ್ಲಿ ನಡೆದಿದೆ.

ಐವರು ಯುವಕರು ಕೆರೆಯಲ್ಲಿ ಈಜಲು ಇಳಿದಿದ್ದು, ಐವರಲ್ಲಿ ಮೂವರು ನೀರು ಪಾಲಾಗಿದ್ದಾರೆ. ನಂದನಹೊಸೂರು ಗ್ರಾಮದ ಯುವಕ ಗಿರೀಶ್ (18), ಹೊರಕೆರೆದೇವರಪುರದ ಸಂಜಯ್ (18) ಹಾಗೂ ಕಣಿವೆ ಜೋಗಳ್ಳಿ ಗ್ರಾಮದ ಮನು (19) ಮೃತರು.

ಐವರು ಯುವಕರು ಕೆರೆಯ ಆಳ ತಿಳಿಯದೇ ಈಜಲು ಧುಮುಕಿದ್ದಾರೆ. ಐವರಲ್ಲಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇಬ್ಬರು ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾರೆ. ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular