HomeKarnatakaಕಾರು - ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸವಾರರ ಸಾವು

ಕಾರು – ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸವಾರರ ಸಾವು

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ತರೀಕೆರೆ ತಾಲೂಕಿನ ದಿಬ್ಬದ ಬಳಿ ನಡೆದಿದೆ.

ಬೈಕಿನಲ್ಲಿ ತೆರಳುತ್ತಿದ್ದ ತರೀಕೆರೆಯ ಅಜೀಮ್ ಹಾಗೂ ಬಿಲಾಲ್ ಮೃತಪಟ್ಟವರಾಗಿದ್ದು, ಕಾರಿನಲ್ಲಿದ್ದ ಶಿವಮೊಗ್ಗ ಜಿಲ್ಲೆ ಹೊಸನಗರದ ನಾಗರಾಜ್, ಸುಚಿತ್ರ, ಆದ್ಯ ಹಾಗೂ ಎರಡು ವರ್ಷದ ಅನು ಗೌಡ ಎಂಬವರಿಗೆ ಗಾಯಗಳಾಗಿದೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಚಿಮ್ಮಿದ ಬೈಕ್ ರಸ್ತೆ ಬದಿ ಕಡಿದು ಉರುಳಿಸಿದ್ದ ಮರಕ್ಕೆ ಅಪ್ಪಳಿಸಿದೆ. ಇದರ ಪರಿಣಾಮ ಬೈಕ್ ಸವಾರರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಗಾಯಗೊಂಡವರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular