HomeKarnatakaಪಾಳುಬಿದ್ದ ಮನೆಗೆ ಹೋದ ಪ್ರೇಮಿಗಳಿಂದ ದುಡುಕಿನ ನಿರ್ಧಾರ: ಪ್ರೀತಿಗೆ ಪೋಷಕರ ವಿರೋಧ ಹಿನ್ನಲೆ ಆತ್ಮಹತ್ಯೆ

ಪಾಳುಬಿದ್ದ ಮನೆಗೆ ಹೋದ ಪ್ರೇಮಿಗಳಿಂದ ದುಡುಕಿನ ನಿರ್ಧಾರ: ಪ್ರೀತಿಗೆ ಪೋಷಕರ ವಿರೋಧ ಹಿನ್ನಲೆ ಆತ್ಮಹತ್ಯೆ

ಧಾರವಾಡ: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ಮೈಲಾರಿ(23) ಹಾಗೂ 16 ವರ್ಷದ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಹೆಬ್ಬಳ್ಳಿ ಹೊರವಲಯದ ಪಾಳುಬಿದ್ದ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರೀತಿಗೆ ಪೋಷಕರ ವಿರೋಧ ಹಿನ್ನಲೆಯಲ್ಲಿ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular