HomeKarnatakaBIG NEWS: ತೀವ್ರ ಕುತೂಹಲ ಮೂಡಿಸಿದ ಬಿ.ಎಸ್.ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

BIG NEWS: ತೀವ್ರ ಕುತೂಹಲ ಮೂಡಿಸಿದ ಬಿ.ಎಸ್.ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಬೆಳಿಗ್ಗೆ 11 ಗಂಟೆಗೆ ಕರೆದಿರುವ ತುರ್ತು ಸುದ್ದಿಗೋಷ್ಠಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ನಿನ್ನೆಯಷ್ಟೇ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಕೂಡ ಜಾರಿಯಾಗಿದೆ. ಇದರ ಬೆನ್ನಲ್ಲೇ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಯಡಿಯೂರಪ್ಪ ಬಿಜೆಪಿಯ ಮಲ್ಲೇಶ್ವರಂ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದು, ಯಾವ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ ಎಂಬುದು ಕುತೂಹಲವಾಗಿದೆ.

ಒಟ್ಟಾರೆ ಮಾಜಿ ಸಿಎಂ ಯಡಿಯೂರಪ್ಪ ನಡೆಸುತ್ತಿರುವ ಸುದ್ದಿಗೋಷ್ಠಿಯತ್ತ ಎಲ್ಲರ ಚಿತ್ತ ನೆಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular