HomeKarnatakaBREAKING NEWS: ತುಮಕೂರು ಗ್ರಾಮಾಂತರ ಶಾಸಕ ಬಿ.ಸಿ. ಗೌರಿಶಂಕರ್ ಆಯ್ಕೆ ಅಸಿಂಧು; ಚುನಾವಣಾ ಅಕ್ರಮದ ಹಿನ್ನೆಲೆಯಲ್ಲಿ...

BREAKING NEWS: ತುಮಕೂರು ಗ್ರಾಮಾಂತರ ಶಾಸಕ ಬಿ.ಸಿ. ಗೌರಿಶಂಕರ್ ಆಯ್ಕೆ ಅಸಿಂಧು; ಚುನಾವಣಾ ಅಕ್ರಮದ ಹಿನ್ನೆಲೆಯಲ್ಲಿ ಆರು ವರ್ಷ ಅನರ್ಹತೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ತುಮಕೂರು ಗ್ರಾಮಾಂತರ ಶಾಸಕ ಬಿ.ಸಿ. ಗೌರಿಶಂಕರ್ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸಿ.ಗೌರಿಶಂಕರ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಏಕಸದಸ್ಯಪೀಠ ಆದೇಶ ಹೊರಡಿಸಿದೆ.

ಶಾಸಕ ಗೌರಿಶಂಕರ್ ವಿರುದ್ಧ ಚುನಾವಣೆಯಲ್ಲಿ ಅಕ್ರಮ ನಡೆಸಿದ ಆರೋಪ ಕೆಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿ.ಸಿ.ಗೌರಿಶಂಕರ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಕಲಬುರ್ಗಿ ಪೀಠದ ನ್ಯಾ. ಸುನೀಲ್ ದತ್ ಯಾದವ್ ತೀರ್ಪು ನೀಡಿದ್ದಾರೆ.

ಅಲ್ಲದೆ ಚುನಾವಣಾ ಅಕ್ರಮದ ಕಾರಣಕ್ಕೆ ಮುಂದಿನ ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular