HomeKarnatakaBIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ಜೆಡಿಎಸ್ ಎಷ್ಟೇ ಬೊಂಬ್ಡಾ ಹೊಡ್ಕೊಂಡ್ರೂ ಪೂರ್ಣ ಶಕ್ತಿಯಿಂದ ಅಧಿಕಾರಕ್ಕೆ ಬರಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬೊಂಬ್ಡಾ ಹೊಡೆದುಕೊಳ್ಳುತ್ತಿರುವುದು ನಾವಲ್ಲ, ಅವರು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಸಿಎಂ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಜೆಡಿಎಸ್ ಬಗ್ಗೆ ಬಹಳ ಲಘುವಾಗಿ ಮಾತನಾಡುತ್ತಿದ್ದಾರೆ. ನಿಮ್ಮಿಬ್ಬರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡುವುದು ಬಿಟ್ರೆ ಬೇರೆ ಕೆಲಸವಿಲ್ಲವೇ? ಚುನಾವಣೆಯಲ್ಲಿ ಅವರಿಗೆ ಸ್ಪಷ್ಟ ಬಹುಮತ ಬರಲ್ಲ ಎಂಬ ಭಯ. ನಮ್ಮ ಬೆಂಬಲ ಎಲ್ಲಿ ಸಿಗಲ್ವೋ ಎಂಬ ಆತಂಕ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ನವರು ನಮ್ಮ ಪಕ್ಷದ ಬಗ್ಗೆ ಕೇವಲವಾಗಿ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ತಾಕತ್ತಿದ್ದರೆ ಕಾಂಗ್ರೆಸ್ ಬಿಟ್ಟು ಹೊಸ ಪಕ್ಷ ಕಟ್ಟಿ 2 ಸೀಟ್ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದರು. ನಾವು ಸ್ಟೇಜ್ ಹಾಕಿ ಜನರನ್ನು ಕರೆಸಿದರೆ ಇವರು ಬಂದು ಕಾರ್ಯಕ್ರಮ ಮಾಡುವಂತಿದೆ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular