ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಪೊಲೀಸರಿಂದ ಬಂಧನ ಭೀತಿ ಎದುರಾಗಿದೆ.
ಎಂ.ಪಿ. ಕುಮಾರಸ್ವಾಮಿ ಅವರ ವಿರುದ್ಧ ಜನ ಪ್ರತಿನಿಧಿಗಳ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರ ಮೂಲಕ ವಾರೆಂಟ್ ಜಾರಿಗೆ ಸೂಚನೆ ನೀಡಲಾಗಿದೆ.
ಚೆಕ್ ಬೌನ್ಸ್ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ. ಶಿಕ್ಷೆಯನ್ನು ಪ್ರಶ್ನಿಸಿ ಶಾಸಕ ಎಂ.ಪಿ. ಕುಮಾರಸ್ವಾಮಿ ಮೇಲ್ಮನವಿ ಸಲ್ಲಿಸಿದ್ದರು. ಕುಮಾರಸ್ವಾಮಿ ಶಿಕ್ಷೆಗೆ ಸೆಷನ್ಸ್ ಕೋರ್ಟ್ ತಡೆ ನೀಡದ ಹಿನ್ನೆಲೆಯಲ್ಲಿ ಎಸಿಎಂಎಂ ನ್ಯಾಯಾಲಯಕ್ಕೆ ದೂರುದಾರ ಅರ್ಜಿ ಸಲ್ಲಿಸಿದ್ದರು. 30 ದಿನಗಳ ಒಳಗೆ ಹಣ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ವಾರೆಂಟ್ ಹೊರಡಿಸಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ವಾರಂಟ್ ಜಾರಿ ಮಾಡಲಾಗಿದೆ. ಒಟ್ಟು 8 ಪ್ರಕರಣದಲ್ಲಿ 1.38 ಕೋಟಿ ರೂಪಾಯಿ ಹಣ ಪಾವತಿಸಬೇಕಿದೆ. ಇಲ್ಲವಾದರೆ ತಲಾ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಿದೆ ಎಂದು ಎಸಿಎಂಎಂ ಕೋರ್ಟ್ ಹೇಳಿತ್ತು.