ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಆಡಳಿತಾರೂಢ ಬಿಜೆಪಿ ಕಸರತ್ತು ನಡೆಸಿದೆ. ಹಿರಿಯೂರು ಶಾಸಕಿ ಪೂರ್ಣಿಮಾ ಅವರ ಪತಿ ಡಿ.ಟಿ.ಶ್ರೀನಿವಾಸ್ ಅವರ ಅಮಾನತು ಆದೇಶವನ್ನು ಬಿಜೆಪಿ ಹಿಂಪಡೆದಿದೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಪಕ್ಷದ ಮುಖಂಡ ಡಿ.ಟಿ.ಶ್ರೀನಿವಾಸ್ ಅವರನ್ನು ಈ ಹಿಂದೆ ಅವರನ್ನು ಉಚ್ಛಾಟನೆ ಮಾಡಿ ಬಿಜೆಪಿ ಆದೇಶ ಹೊರಡಿಸಿತ್ತು. ಇದೀಗ ಚುನಾವಣೆ ಘೋಷಣೆ ಬೆನ್ನಲ್ಲೇ ಅವರ ಉಚ್ಛಾಟನೆ ಆದೇಶ ವಾಪಸ್ ಪಡೆದಿದೆ.
ಈ ಬಗ್ಗೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.