HomeCrimeSHOCKING NEWS: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ; ಲಾಡ್ಜ್ ನಲ್ಲಿ ಸಾವಿಗೆ ಶರಣಾಗಿದ್ದೇಕೆ....?

SHOCKING NEWS: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ; ಲಾಡ್ಜ್ ನಲ್ಲಿ ಸಾವಿಗೆ ಶರಣಾಗಿದ್ದೇಕೆ….?

ಮಂಗಳೂರು: ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಕೆ.ಎಸ್.ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್ ನಲ್ಲಿ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ದೇವೇಂದ್ರಪ್ಪ, ಪತ್ನಿ ನಿರ್ಮಲಾ ಹಾಗೂ ಮಕ್ಕಳಾದ ಚೈತ್ರಾ, ಚೈತನ್ಯ ಆತ್ಮಹತ್ಯೆಗೆ ಶರಣಾದವರು.

ಮೈಸೂರು ಮೂಲದ ಕುಟುಂಬ ಮಾರ್ಚ್ 27ರಂದು ಮಂಗಳೂರಿನ ಕರುಣಾ ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಿತ್ತು. ನಿನ್ನೆ ಸಂಜೆ ರೂಮ್ ಚೆಕ್ ಔಟ್ ಮಾಡಬೇಕಿತ್ತು. ಆದರೆ ಇಂದು ಬೆಳಿಗ್ಗೆಯಾದರೂ ಚಕ್ ಔಟ್ ಮಾಡದಿದ್ದಾಗ ಲಾಡ್ಜ್ ನವರು ಬಂದು ನೋಡಿದಾಗ ಇಡೀ ಕುಟುಂಬ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತದೇಹಗಳ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಲಾಗಿದೆ. ದೇವೇಂದ್ರಪ್ಪ ಹೆಂಡತಿ ಹಾಗೂ ಇಬ್ಬರು ಮಕ್ಕಳಿಗೆ ವಿಷ ಕೊಟ್ಟು ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular