ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಕಳೆದ ಎರಡು ದಿನಗಳಿಂದ ಪ್ರತಿದಿನ 3000ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಡುತ್ತಿದೆ. ಕಳೆದ 24 ಗಂಟೆಯಲ್ಲಿ 3095 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,30,867 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 15,208 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,69,711 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 06,553 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,99,034 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,18,694 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.