
ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಅಜ್ಜಿ ಮನೆಗೆ ಬಂದಿದ್ದ ಬಾಲಕನ ಮೇಲೆ ದುರುಳರು ಅಟ್ಟಹಾಸ ಮೆರೆದು, ಕೊಲೆ ಮಾಡಿದ್ದಾರೆ.
ಬಾಲಕ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದರು. ಪೊಲೀಸರು ಶೋಧ ನಡೆಸಿದಾಗ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

