HomeKarnatakaBIG NEWS: JDS ಸೇರ್ಪಡೆಯಾದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ

BIG NEWS: JDS ಸೇರ್ಪಡೆಯಾದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ

ಬೆಂಗಳೂರು: ವಿಧನಾಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ನಾಯಕರ ಪಕ್ಷಾಂತರ ಪರ್ವ ಚುರುಕುಗೊಂಡಿದೆ. ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಇಂದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಜೆ.ಪಿ.ಭವನದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖೂಬಾ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಬಸವಕಲ್ಯಾಣ ಕ್ಷೇತ್ರದ ಶಾಸಕರಾಗಿದ್ದ ಮಲ್ಲಿಕಾರ್ಜುನ ಖೂಬಾ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಬಿಜೆಪಿಯಿಂದ ಉಚ್ಛಾಟನೆಗೊಂಡಿದ್ದರು. ಇದೀಗ ಚುನಾವಣೆ ಸಮಿಪಿಸುತ್ತಿದ್ದಂತೆ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular