HomeKarnatakaBIG NEWS: ನಟ ಚೇತನ್ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಕ್ರಮಕ್ಕೆ ನಿರ್ಧಾರ

BIG NEWS: ನಟ ಚೇತನ್ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಕ್ರಮಕ್ಕೆ ನಿರ್ಧಾರ

ಬೆಂಗಳೂರು: ಅಂಬರೀಶ್ ಸ್ಮಾರಕ ನಿರ್ಮಾಣ ವಿಚಾರವಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ನಟ ಚೇತನ್ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮಕ್ಕೆ ಮುಂದಾಗಿದೆ.

ಚಿತ್ರರಂಗದಲ್ಲಿದ್ದುಕೊಂಡು ಚಿತ್ರರಂಗಕ್ಕೆ ಮುಜುಗರವನ್ನುಂಟುಮಾಡುವ ಹೇಳಿಕೆಗಳನ್ನು ನೀಡುತ್ತಿರುವ ನಟ ಚೇತನ್ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಬಾ.ಮಾ.ಹರೀಶ್ ತಿಳಿಸಿದ್ದಾರೆ.

ಮಾರ್ಚ್ 27 ರಂದು ಅಂಬರೀಶ್ ಸ್ಮಾರಕ ಉದ್ಘಾಟನೆ ಮಾಡಲಾಗಿತ್ತು. ಅಲ್ಲದೇ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಟ್ಟಿದ್ದೆವು. ಈ ಬಗ್ಗೆ ನಟ ಚೇತನ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಅಂಬರೀಶ್ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದವರು. ಚೇತನ್ ಪದೇ ಪದೇ ಚಿತ್ರರಂಗದ ಒಕ್ಕೋರಲ ಅಭಿಪ್ರಾಯದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗಾಗಿ ಅವರಿಗೆ ತಿಳಿ ಹೇಳಲು ಯತ್ನಿಸುತ್ತೇವೆ. ಆದರೂ ಇದೇ ವರ್ತನೆ ಮುಂದುವರೆಸಿದರೆ ಚಿತ್ರರಂಗದಿಂದ ಅಸಹಕಾರ ಕ್ರಮ ಕೈಗೊಳ್ಳುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular