ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯುತ್ತಿದ್ದು, ಮಂಗಳವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದೆ.
ವಿಧಾನಸಭಾ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗಿದೆ.
ಅಲ್ಲದೆ ರಾಜ್ಯ ವಿಧಾನಸಭೆಗೆ ಮೇ 10ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ಯಾವುದೇ ವ್ಯಾಪಾರ, ಕೈಗಾರಿಕಾ ಉದ್ಯಮ ಅಥವಾ ಇತರೆ ಸಂಸ್ಥೆಯ ಉದ್ಯೋಗದಲ್ಲಿರುವ ನೌಕರರಿಗೆ ಕಡ್ಡಾಯವಾಗಿ ವೇತನ ಸಹಿತ ರಜೆ ನೀಡುವಂತೆ ಕೇಂದ್ರ ಚುನಾವಣಾ ಆಯೋಗ ಆದೇಶಿಸಿದೆ. ಇದನ್ನು ಉಲ್ಲಂಘಿಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದೆ.