HomeKarnatakaBIG NEWS: ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ಪ್ರಕಟ; ಕುತೂಹಲ ಕೆರಳಿಸಿದ ಹಾಸನ ಕ್ಷೇತ್ರ

BIG NEWS: ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ಪ್ರಕಟ; ಕುತೂಹಲ ಕೆರಳಿಸಿದ ಹಾಸನ ಕ್ಷೇತ್ರ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಜೆಡಿಎಸ್, ಮತದಾನದ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. ಇಂದು ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದ್ದು, ಹಾಸನ ವಿಧಾನಸಭಾ ಕ್ಷೇತ್ರದ ಕುರಿತಂತೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ.

ಹಾಸನ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮಾಜಿ ಸಚಿವ ಎಚ್.ಡಿ. ರೇವಣ್ಣನವರ ಪತ್ನಿ ಭವಾನಿ ರೇವಣ್ಣ ಹಾಗೂ ಮಾಜಿ ಶಾಸಕ ಪ್ರಕಾಶ್ ಅವರ ಪುತ್ರ ಸ್ವರೂಪ್ ಆಕಾಂಕ್ಷಿಗಳಾಗಿದ್ದು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ, ಸ್ವರೂಪ್ ಪರವಾಗಿದ್ದರೆ, ಪತ್ನಿಗೆ ಟಿಕೆಟ್ ಕೊಡಿಸಲು ರೇವಣ್ಣ ಪೈಪೋಟಿ ನಡೆಸುತ್ತಿದ್ದಾರೆ.

ಹೀಗಾಗಿ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಜೆಡಿಎಸ್ ನಾಯಕರಿಗೆ ಕಗ್ಗಂಟಾಗಿ ಪರಿಣಮಿಸಿದ್ದು, ತಮ್ಮ ಪತ್ನಿಗೆ ಟಿಕೆಟ್ ಸಿಗದಿದ್ದರೂ ಪರವಾಗಿಲ್ಲ ಯಾವುದೇ ಕಾರಣಕ್ಕೂ ಸ್ವರೂಪ್ ಅವರಿಗೆ ಟಿಕೆಟ್ ನೀಡಬಾರದು ಎಂದು ಎಚ್.ಡಿ. ರೇವಣ್ಣ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡುವ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕುಮಾರಸ್ವಾಮಿ ಹೇಳುತ್ತಿದ್ದು, ಇಂದು ಬಿಡುಗಡೆಯಾಗಲಿರುವ ಪಟ್ಟಿಯಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಣೆಯಾಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular