HomeKarnatakaBIG NEWS: ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಕಸರತ್ತು; ಖಾಸಗಿ ರೆಸಾರ್ಟ್ ನಲ್ಲಿ ಕೋರ್ ಕಮಿಟಿ ಸಭೆ

BIG NEWS: ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಕಸರತ್ತು; ಖಾಸಗಿ ರೆಸಾರ್ಟ್ ನಲ್ಲಿ ಕೋರ್ ಕಮಿಟಿ ಸಭೆ

 

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಬರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ಕಾಂಗ್ರೆಸ್, ಜೆಡಿಎಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಆಡಳಿತರೂಢ ಬಿಜೆಪಿ ಮಾತ್ರ ಈ ವಿಚಾರದಲ್ಲಿ ಹಿಂದೆ ಬಿದ್ದಿದೆ. ಹೀಗಾಗಿ ಅಭ್ಯರ್ಥಿಗಳ ಆಯ್ಕೆಗಾಗಿ ಕಾರ್ಯಕರ್ತರಿಂದಲೇ ಆಂತರಿಕ ಮತದಾನ ನಡೆಸಲಾಗಿದೆ.

ಅಭ್ಯರ್ಥಿಗಳ ಆಯ್ಕೆಗಾಗಿ ರಾಜ್ಯ ರಾಜಧಾನಿ ಬೆಂಗಳೂರಿನ ನೆಲಮಂಗಲ ಹೊರ ವಲಯದಲ್ಲಿನ ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿದ್ದು, ಇಂದು ನಾಲ್ಕು ವಿಭಾಗೀಯ ಜಿಲ್ಲೆಗಳ ಒಟ್ಟು 16 ಜಿಲ್ಲೆಗಳ ಕೋರ್ ಕಮಿಟಿ ಸದಸ್ಯರ ಸಭೆ ನಡೆಯುತ್ತಿದೆ.

ತುಮಕೂರು, ಧಾರವಾಡ, ಬೆಳಗಾವಿ ಹಾಗೂ ಬಳ್ಳಾರಿ ವಿಭಾಗಿಯ ಜಿಲ್ಲೆಗಳ ಬಿಜೆಪಿ ಮುಖಂಡರ ಜೊತೆ ಸಭೆ ನಡೆಯುತ್ತಿದ್ದು, ಇದರಲ್ಲಿ ರಾಜ್ಯ ಕೋರ್ ಕಮಿಟಿ ಸದಸ್ಯರು ಸಹ ಪಾಲ್ಗೊಂಡಿದ್ದಾರೆ. ಈ ಸಭೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಹೆಸರನ್ನು ಅಂತಿಮ ತೀರ್ಮಾನಕ್ಕಾಗಿ ಕೇಂದ್ರ ಸಮಿತಿಗೆ ಕಳುಹಿಸಲಾಗುತ್ತದೆ ಎಂದು ತಿಳಿದು ಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular