
ಈ ವೇಳೆ ಸುರ್ಜೇವಾಲಾ ಮುಜುಗರಕ್ಕೀಡಾಗಿದ್ದಾರೆ. ಸಭೆಯಲ್ಲಿ ಸುರ್ಜೇವಾಲಾ ಭಾಷಣ ಆರಂಭಿಸುತ್ತಿದ್ದಂತೆ ಎದ್ದು ನಿಂತ ಕಾರ್ಯಕರ್ತರು ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧೆ ಮಾಡಬೇಕು ಎಂದು ಘೋಷಣೆ ಕೂಗಿದ್ದಾರೆ.
ಈ ವೇಳೆ ಎದ್ದುನಿಂತ ಸಿದ್ದರಾಮಯ್ಯ ಕಾರ್ಯಕರ್ತರನ್ನು ಸಮಾಧಾನಪಡಿಸಲು ಯತ್ನಿಸಿದ್ದಾರೆ. ನಾನಿನ್ನೂ ತೀರ್ಮಾನ ಮಾಡಿಲ್ಲ ದಯವಿಟ್ಟು ಕುಳಿತುಕೊಳ್ಳುವಂತೆ ಸೂಚಿಸಿದ್ದಾರೆ. ಆದರೂ ಕಾರ್ಯಕರ್ತರು ಸಿದ್ದರಾಮಯ್ಯ, ಸಿದ್ದರಾಮಯ್ಯ ಎಂದು ಕೂಗಿದ್ದಾರೆ ಕೋಲಾರ ಕಾಂಗ್ರೆಸ್ ಪೂರ್ವಭಾವಿ ಸಭೆಯಲ್ಲಿ ಹೈಡ್ರಾಮಾ ನಡೆದಿದೆ.

