HomeKarnatakaBIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಭಾರ ಜಿಲ್ಲಾ ಕಾರ್ಯನಿರ್ವಾಹಣಾಧಿಕಾರಿ

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಭಾರ ಜಿಲ್ಲಾ ಕಾರ್ಯನಿರ್ವಾಹಣಾಧಿಕಾರಿ

ಧಾರವಾಡ: ಕೆರೆ ಅಭಿವೃದ್ಧಿ ಕಾಮಗಾರಿಗಳ ಬಿಲ್ ಮಂಜೂರಾತಿಗೆ ಲಂಚ ಪಡೆಯುತ್ತಿದ್ದಾಗ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ಧ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡದ ನವಲೂರಿನ ವಿನಾಯಕ ನಗರದಲ್ಲಿಈ ಘಟನೆ ನಡೆದಿದೆ. ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ತಂತ್ರಜ್ಞ ಹಾಗೂ ಪ್ರಭಾರ ಜಿಲ್ಲಾ ಕಾರ್ಯನಿರ್ವಾಹಣಾಧಿಕಾರಿ ಶಿವಲಿಂಗಸ್ವಾಮಿ ಹಲಗಲಿಮಠ ಲೋಕಾಯುಕ್ತ ಬಲೆಗೆ ಬಿದ್ದವರು.

ಸವಣೂರು ಪಟ್ಟಣದ ಗುತ್ತಿಗೆದಾರ ಸುರೇಶ್ ಕಳಸೂರ ಎಂಬುವವರಿಗೆ 2 ಲಕ್ಷದ 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 1 ಲಕ್ಷದ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶಿವಲಿಂಗಸ್ವಾಮಿ ಹಲಗಲಿಮಠ ಅವರನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular