alex Certify ವಿದ್ಯಾರ್ಥಿಗಳ ಸಾಮರ್ಥ್ಯ ವೃದ್ಧಿಗೆ ಶಿಕ್ಷಕರಿಗೆ 20 ವಿಷಯಗಳ ತರಬೇತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಸಾಮರ್ಥ್ಯ ವೃದ್ಧಿಗೆ ಶಿಕ್ಷಕರಿಗೆ 20 ವಿಷಯಗಳ ತರಬೇತಿ

ನವದೆಹಲಿ: CBSE ವತಿಯಿಂದ CBSE ಸಂಯೋಜಿತ ಮತ್ತು ಸರ್ಕಾರಿ ಅನುದಾನಿತ ಶಾಲೆಗಳ ಶಿಕ್ಷಕರ ನಿರಂತರ ವೃತ್ತಿಪರ ಅಭಿವೃದ್ಧಿಗಾಗಿ ವಿಶೇಷ ಡ್ರೈವ್ ಪ್ರಾರಂಭಿಸಲಿದೆ.

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE) ಶಿಕ್ಷಕರ ನಿರಂತರ ವೃತ್ತಿಪರ ಅಭಿವೃದ್ಧಿಗಾಗಿ(CPD) ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಿಬಿಎಸ್‌ಇ ವಿದ್ಯಾರ್ಥಿಗಳ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮಗಳಿಗೆ(ಸಿಬಿಪಿ) ಸಂಬಂಧಿಸಿದ 20 ವಿಷಯಗಳ ತರಬೇತಿಯನ್ನು ಶಿಕ್ಷಕರಿಗೆ ನೀಡಲಾಗುವುದು ಎಂದು ತಿಳಿಸಿದೆ.

ಮಂಡಳಿಯ ನಿಯಮಗಳ ಪ್ರಕಾರ, ಪ್ರತಿ ಶಿಕ್ಷಕರು ಒಂದು ವರ್ಷದಲ್ಲಿ ಮಂಡಳಿಯು ನಡೆಸುವ ಕನಿಷ್ಠ 25 ಗಂಟೆಗಳ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿದೆ. ಉಳಿದ ತರಬೇತಿಯನ್ನು ಇತರ ಮೂಲಗಳಿಂದ ಸಂಬಂಧಪಟ್ಟ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಿಕ್ಷಣ ಇಲಾಖೆಗಳು ಏರ್ಪಡಿಸುತ್ತವೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ಪ್ರತಿ ಶಾಲೆಯು ತನ್ನ ಎಲ್ಲಾ ಶಿಕ್ಷಕರ ಭಾಗವಹಿಸುವಿಕೆಯನ್ನು ಕನಿಷ್ಠ 50 ಗಂಟೆಗಳ ಸಿಪಿಡಿಯಲ್ಲಿ ಖಚಿತಪಡಿಸಿಕೊಳ್ಳಬೇಕು ಎಂದು ಶಿಫಾರಸು ಮಾಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...