ನೀತಿ ಸಂಹಿತೆ ಜಾರಿಯಲ್ಲಿರುವಾಗ ಅಧಿಕಾರಿಗಳ ಅಟ್ಟಹಾಸ: ರೈತರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದೌರ್ಜನ್ಯ

ಶಿವಮೊಗ್ಗ: ತುಮಕೂರಿನ ಗುಬ್ಬಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಅಟ್ಟಹಾಸ ಮೆರೆದಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿ ಇರುವಾಗ ಅರಣ್ಯಾಧಿಕಾರಿಗಳು ಅಟ್ಟಹಾಸ ತೋರಿದ್ದಾರೆ ಎಂದು ಶಿವಮೊಗ್ಗದಲ್ಲಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂದಾಯ ಭೂಮಿಯಲ್ಲಿ ಮೂರು ದಶಕದಿಂದ ರೈತರು ಸಾಗುವಳಿ ಮಾಡುತ್ತಿದ್ದಾರೆ. ಸಾಗುವಳಿ ಭೂಮಿ ಅರಣ್ಯ ಇಲಾಖೆಗೆ ಸೇರಿದ್ದು ಎಂದು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಬಡವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಮಾರಣಾಂತಿಕ ಹಲ್ಲೆ ಮಾಡಿ ರಾಕ್ಷಸ ಪ್ರವೃತ್ತಿ ತೋರಿದ್ದಾರೆ ಎಂದು ಹೇಳಿದ್ದಾರೆ.

ರೈತರ ವಿರುದ್ಧ ಕೇಸ್ ದಾಖಲಿಸಿ ಜೈಲಿಗೆ ಅಟ್ಟಿದ್ದಾರೆ. ರೈತರ ಮೇಲೆ ದೌರ್ಜನ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯಲಹಂಕದಲ್ಲಿ ರೈತರ 5 ಎಕರೆ ಸಪೋಟ, ಅಡಿಕೆ, ತೆಂಗು ನಾಶ ಮಾಡಲಾಗಿದೆ. ಬೆಳೆ ನಾಶ ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪತ್ರದ ಮೂಲಕ ರಾಜ್ಯ ರೈತ ಸಂಘ ರಾಜ್ಯಪಾಲರಿಗೆ ಮನವಿ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read