alex Certify ಜೆಡಿಎಸ್ ಪಕ್ಷದ ಹಿಡಿತದಲ್ಲಿರುವ ಹಾಸನ ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಪಕ್ಷದ ಹಿಡಿತದಲ್ಲಿರುವ ಹಾಸನ ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಶಾಸಕ ಸಿ.ಎನ್. ಬಾಲಕೃಷ್ಣ ಮತ್ತು ಪಟೇಲ್ ಶಿವರಾಮ್ ಅವರು ನಿರ್ದೇಶಕರಾಗಿರುವ ಹಾಸನ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಜೆಡಿಎಸ್ ಪಕ್ಷದ ಹಿಡಿತದಲ್ಲಿರುವ ಹಾಸನ ಡಿಸಿಸಿ ಬ್ಯಾಂಕ್ ಗೆ ಆರ್ಥಿಕ ವರ್ಷದ ಅಂತಿಮ ದಿನವಾದ ಮಾರ್ಚ್ 31ರಂದು ಆಗಮಿಸಿದ ಐಟಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಂಡ ಬ್ಯಾಂಕ್ ನಲ್ಲಿ ನಗದು, ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಲಾಕರ್ ಗಳನ್ನು ತೆರೆದು ವೀಕ್ಷಿಸಿದ್ದಾರೆ. ಬ್ಯಾಂಕಿಗೆ ಸಾರ್ವಜನಿಕರ ಭೇಟಿ ನಿರ್ಬಂಧಿಸಿ ಎಲ್ಲಾ ಸಿಬ್ಬಂದಿಗಳ ಸಮ್ಮುಖದಲ್ಲಿ ದಾಖಲೆ ಪತ್ರ, ಕಡತಗಳ ಪರಿಶೀಲನೆ ನಡೆಸಲಾಗಿದೆ. ಬ್ಯಾಂಕಿನಲ್ಲಿ ಅಕ್ರಮ ನಡೆದಿದೆ ಎನ್ನುವ ದೂರಿನ ಮೇರೆಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...