HomeKarnatakaBIG NEWS: ಜೆಡಿಎಸ್ ನ ಮತ್ತೊಂದು ವಿಕೆಟ್ ಪತನ; ರಾಜೀನಾಮೆ ನೀಡಲು ಮುಂದಾದ ಅರಸಿಕೆರೆ ಶಾಸಕ

BIG NEWS: ಜೆಡಿಎಸ್ ನ ಮತ್ತೊಂದು ವಿಕೆಟ್ ಪತನ; ರಾಜೀನಾಮೆ ನೀಡಲು ಮುಂದಾದ ಅರಸಿಕೆರೆ ಶಾಸಕ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ಜೆಡಿಎಸ್ ಗೆ ಆಘಾತದ ಮೇಲೆ ಆಘಾತವುಂಟಾಗುತ್ತಿದೆ. ಜೆ ಡಿ ಎಸ್ ನ ಹಲವು ಶಾಸಕರು ಪಕ್ಷ ತೊರೆಯುತ್ತಿದ್ದು, ಇಂದು ಮತ್ತೋರ್ವ ಶಾಸಕ ಪಕ್ಷಕ್ಕೆ ಗುಡ್ ಬೈ ಹೇಳಲಿದ್ದಾರೆ.

ನಿನ್ನೆಯಷ್ಟೇ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದರ ಬೆನ್ನಲ್ಲೇ ಇದೀಗ ಜೆಡಿಎಸ್ ನ ಅರಸಿಕೆರೆ ಶಾಸಕ ಶಿವಲಿಂಗೇಗೌಡ ಜೆಡಿಎಸ್ ಗೆ ರಾಜೀನಾಮೆ ನೀಡಲಿದ್ದಾರೆ.

ಸಾವಿರಾರು ಬೆಂಬಲಿಗರೊಂದಿಗೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತೆರಳಲಿರುವ ಶಿವಲಿಂಗೇಗೌಡ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಲಿದ್ದಾರೆ. ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular