HomeKarnatakaBIG NEWS: ಕಾಂಗ್ರೆಸ್ ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ; ಸಿದ್ದರಾಮಯ್ಯ ಭೇಟಿಯಾದ ಅಖಂಡ ಶ್ರೀನಿವಾಸ್ ಮೂರ್ತಿ

BIG NEWS: ಕಾಂಗ್ರೆಸ್ ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ; ಸಿದ್ದರಾಮಯ್ಯ ಭೇಟಿಯಾದ ಅಖಂಡ ಶ್ರೀನಿವಾಸ್ ಮೂರ್ತಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಅಂತಿಮ ಹಂತದ ತಯಾರಿ ನಡೆದಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್ ಕೈ ತಪ್ಪುವ ಭೀತಿಯಲ್ಲಿರುವ ಆಕಾಂಕ್ಷಿಗಳು ಸಿದ್ದರಾಮಯ್ಯ ನಿವಾಸಕ್ಕೆ ದೌಡಾಯಿಸಿದ್ದಾರೆ.

ಶಾಸಕ ಜಮೀರ್ ಅಹ್ಮದ್ ಜೊತೆ ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ, ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ್ದು, ಟಿಕೆಟ್ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.

ಪುಲಕೇಶಿ ನಗರದ ಟಿಕೆಟ್ ಹಂಚಿಕೆ ವಿಚಾರ ಇನ್ನೂ ಫೈನಲ್ ಆಗದ ಹಿನ್ನೆಲೆಯಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಟಿಕೆಟ್ ಗಾಗಿ ಚರ್ಚೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular