ಮೈಸೂರು: ಅವೈಜ್ಞಾನಿಕವಾಗಿ ಸರ್ಕಾರದಿಂದ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಮೀಸಲಾತಿ ಹೆಚ್ಚಳವೇ ಬಿಜೆಪಿಗೆ ತಿರುಗುಬಾಣವಾಗಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಂವಿಧಾನದ ಮಾನ್ಯತೆ ಇಲ್ಲದ ರೀತಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಈ ಕ್ರಮವೇ ಅವೈಜ್ಞಾನಿಕ ಎಂದು ಹೇಳಿದರು.
ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿರುವಾಗ ಹೇಗೆ ಸರ್ಕಾರಿ ಕಾರ್ಯಕ್ರಮಗಳನ್ನು ಮಾಡುತ್ತಾರೆ? ಪ್ರಧಾನಿಗೂ ಒಂದೇ ನೀತಿ ಸಂಹಿತೆ. ಸಿಎಂಗೂ ಒಂದೇ ನೀತಿ ಸಂಹಿತೆ ಇರುವುದು. ಚುನಾವಣಾ ಆಯೋಗ ವಿಶೇಷ ಅನುಮತಿ ನೀಡಿದರೆ ಮಾತ್ರ ಕಾರ್ಯಕ್ರಮ ಮಾಡಬಹುದು ಎಂದು ಹೇಳಿದರು.
ಇದೇ ವೇಳೆ ಇನ್ನು 2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಲಿದೆ. ನಾಡಿದ್ದು ಟಿಕೆಟ್ ಫೈನಲ್ ಮಾಡುವ ಕುರಿತು ಸಭೆ ನಡೆಯಲಿದೆ. ಸಭೆ ಬಳಿಕ ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಯಾಗಲಿದೆ ಎಂದರು.