ಕೊಪ್ಪಳ: ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭಾಷಣ ಮಾಡುತ್ತಿದ್ದ ವೇಳೆ ಪೊಲೀಸರು ಎಂಟ್ರಿ ಕೊಟ್ಟ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ.
ಬಿ.ಎಲ್. ಸಂತೋಷ್ ಭಾಷಣ ಮಾಡುತ್ತಿದ್ದಾಗ ಪೊಲೀಸರು ಆಗಮಿಸಿದ್ದು, ಭಾಷಣವನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ಚುನಾವಣಾಧಿಕಾರಿಗಳಿಂದ ಪರವಾನಗಿ ಪಡೆದ ಸಮಯ ಮೀರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು, ಚುನಾವಣಾಧಿಕಾರಿಗಳು ವೇದಿಕೆಗೆ ಆಗಮಿಸಿ ಭಾಷಣ ನಿಲ್ಲಿಸುವಂತೆ ಹೇಳಿದ್ದಾರೆ.
ಆದರೂ ಬಿ.ಎಲ್.ಸಂತೋಷ್ ಭಾಷಣದ ವೇಳೆ ನೋಟೀಸ್ ನೀಡಿದರೆ ನೀವು ಹೆದರಬೇಡಿ ನಾನು ಎದುರಿಸುತ್ತೇನೆ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ.
ಬಳಿಕ ಅಧಿಕಾರಿಗಳು ಬಿ.ಎಲ್. ಸಂತೋಷ್ ಅವರಿಗೆ ಕಾರ್ಯಕ್ರಮ ಇಲ್ಲಿಗೆ ನಿಲ್ಲಿಸುವಂತೆ ತಿಳಿಸಿದ್ದಾರೆ. ಅಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮೊಟಕುಗೊಳಿಸಲಾಯಿತು ಎಂದು ತಿಳಿದುಬಂದಿದೆ.