HomeKarnatakaಸಿದ್ಧರಾಮಯ್ಯ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಹಿರಿಯ ಶಾಸಕ ರಮೇಶ್ ಕುಮಾರ್: ಮೂಲೆಗುಂಪು ಮಾಡಿದ್ರೆ ಪಕ್ಷವೇ...

ಸಿದ್ಧರಾಮಯ್ಯ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಹಿರಿಯ ಶಾಸಕ ರಮೇಶ್ ಕುಮಾರ್: ಮೂಲೆಗುಂಪು ಮಾಡಿದ್ರೆ ಪಕ್ಷವೇ ಇರಲ್ಲ

ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡಲು ಹುನ್ನಾರ ನಡೆದಿದೆಯಾ ಎಂಬ ಚರ್ಚೆ ಶುರುವಾದಂತಿದೆ. ಸ್ವತಃ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ರಮೇಶ್ ಕುಮಾರ್ ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ.

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡಿದರೆ ಕಷ್ಟವಾಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಇರುವುದಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ರಮೇಶ್ ಕುಮಾರ್ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಮುನಿಸಿಕೊಂಡರೆ ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆದ ಗತಿ ರಾಜ್ಯದಲ್ಲಿಯೂ ಆಗುತ್ತದೆ, ಸಿದ್ದರಾಮಯ್ಯ ಮುನಿಸಿಕೊಂಡು ಹೋದರೆ ಮನವೊಲಿಸಬೇಕಾಗುತ್ತದೆ. ರಾಹುಲ್ ಗಾಂಧಿ ಪದೇಪದೇ ಮನವೊಲಿಸಬೇಕಾಗುತ್ತದೆ. ಸಿದ್ದರಾಮಯ್ಯರ ಮನವೊಲಿಸಿ ವಿಪಕ್ಷದಲ್ಲಿ ಕೂರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಕೋಲಾರಕ್ಕೆ ಬರದಿದ್ದರೂ ಕಾಂಗ್ರೆಸ್ ಪಕ್ಷ ಮುಳುಗುತ್ತದೆ. ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಮುಳುಗಿ ಹೋಗುತ್ತದೆ ಎಂದು ಕೋಲಾರ ಜಿಲ್ಲೆ ಶ್ರೀನಿವಾಸಪುರದಲ್ಲಿ ನಡೆದ ಕುರುಬರ ಸಂಘದ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ರಮೇಶ್ ಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular