HomeKarnatakaಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ, ರಾಹುಕಾಲದಲ್ಲಿ ನಾಮಪತ್ರ ಸಲ್ಲಿಕೆ: ಸತೀಶ್ ಜಾರಕಿಹೊಳಿ

ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ, ರಾಹುಕಾಲದಲ್ಲಿ ನಾಮಪತ್ರ ಸಲ್ಲಿಕೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಳ್ಳುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ವಿಶೇಷ ವಾಹನ ಸಿದ್ಧಪಡಿಸಲಾಗಿದ್ದು, ನಾಲ್ಕೈದು ದಿನಗಳಲ್ಲಿ ಸ್ಮಶಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಾರಿಯೂ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸುತ್ತೇವೆ. ನಾವು ಮೌಲ್ಯಕ್ಕೆ ಒತ್ತು ನೀಡುವುದಿಲ್ಲ. ಬಸವ ತತ್ವ, ಅಂಬೇಡ್ಕರ್, ಬುದ್ಧನ ವಿಚಾರಗಳನ್ನು ಅಳವಡಿಸಿಕೊಂಡು ಮೌಲ್ಯಕ್ಕೆ ಸೆಡ್ಡು ಹೊಡೆದು ಹಲವು ಕಾರ್ಯಕ್ರಮ ಮಾಡಿದ್ದೇವೆ. ಅಂತೆಯೇ ಪ್ರಚಾರ ವಾಹನಕ್ಕೆ ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular