HomeKarnatakaಶಿವಮೊಗ್ಗದಲ್ಲಿ ಹೃದಯವಿದ್ರಾವಕ ಘಟನೆ: ನಾಯಿ ಬಾಯಲ್ಲಿ ನವಜಾತ ಶಿಶು

ಶಿವಮೊಗ್ಗದಲ್ಲಿ ಹೃದಯವಿದ್ರಾವಕ ಘಟನೆ: ನಾಯಿ ಬಾಯಲ್ಲಿ ನವಜಾತ ಶಿಶು

ಶಿವಮೊಗ್ಗ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಆಸ್ಪತ್ರೆಯ ಆವರಣದಲ್ಲಿ ನವಜಾತ ಶಿಶುವನ್ನು ಬಾಯಿಯಲ್ಲಿ ಕಚ್ಚಿಕೊಂಡು ನಾಯಿ ಓಡಾಡಿದೆ.

ಮಾರ್ಚ್ 31 ರಂದು ಬೆಳಿಗ್ಗೆ ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ವಾರ್ಡ್ ಸಮೀಪ ನಾಯಿಯೊಂದು ನವಜಾತ ಶಿಶುವನ್ನು ಕಚ್ಚಿಕೊಂಡು ಹೋಗುತ್ತಿರುವುದನ್ನು ಗಮನಿಸಿದ ಜನ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅಲ್ಲಿಂದ ನಾಯಿಯನ್ನು ಓಡಿಸಿ ಮಗುವನ್ನು ಪರೀಕ್ಷಿಸಿದಾಗ ನವಜಾತ ಹೆಣ್ಣು ಶಿಶು ಮೃತಪಟ್ಟಿರುವುದು ಕಂಡು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾರೋ ಆಸ್ಪತ್ರೆಯ ಮಕ್ಕಳ ವಾರ್ಡ್ ಹಿಂಭಾಗ ಮಗುವನ್ನು ಬಿಟ್ಟು ಹೋಗಿದ್ದಾರೆ. ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆತ್ತವರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಮೃತ ಶಿಶುವಿನ ಮರಣೋತ್ತರ ಪರೀಕ್ಷೆ ನಡೆಸಿ ಶವಾಗಾರದಲ್ಲಿ ಇರಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular