ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ, ಹೀಗಾಗಿ ಹೊಸಕೋಟೆ ಕ್ಷೇತ್ರದಿಂದ ತಮ್ಮ ಪುತ್ರ ನಿತಿನ್ ಪುರುಷೋತ್ತಮ್ ಅವರಿಗೆ ಟಿಕೆಟ್ ನೀಡುವಂತೆ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಬಿಜೆಪಿ ವರಿಷ್ಠರಿಗೆ ಮನವಿ ಮಾಡಿದ್ದರು.
ಕಳೆದ ವಿಧಾನಸಭೆ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ವಿರುದ್ಧ ಎಂಟಿಬಿ ನಾಗರಾಜ್ ಪರಾಭವಗೊಂಡಿದ್ದು, ಬಳಿಕ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಿ ಸಚಿವರನ್ನಾಗಿಸಲಾಗಿತ್ತು.
ಹೀಗಾಗಿ ಎಂಟಿಬಿ ನಾಗರಾಜು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪುತ್ರ ನಿತಿನ್ ಪುರುಷೋತ್ತಮ್ ಅವರಿಗೆ ಟಿಕೆಟ್ ಕೇಳಿದ್ದು, ಆದರೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಶರತ್ ಬಚ್ಚೇಗೌಡ ಅವರಿಗೆ ನಿತಿನ್ ಪ್ರಬಲ ಪೈಪೋಟಿ ನೀಡಲಾರರು ಎಂಬ ಅಭಿಪ್ರಾಯ ರಾಜ್ಯ ಬಿಜೆಪಿ ನಾಯಕರಲ್ಲಿದೆ ಎನ್ನಲಾಗಿದೆ. ಹೀಗಾಗಿ ಹೊಸಕೋಟೆ ಕ್ಷೇತ್ರಕ್ಕೆ ಎಂಟಿಬಿ ನಾಗರಾಜ್ ಹಾಗೂ ಅವರ ಪುತ್ರ ನಿತಿನ್ ಪುರುಷೋತ್ತಮ್ ಅವರ ಎರಡು ಹೆಸರುಗಳನ್ನು ಹೈಕಮಾಂಡ್ ಗೆ ಕಳುಹಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.